ಸಂಬಳ ಕಡಿಮೆ ಅಂತ ಪತ್ರಕರ್ತರಿಗೆ, ಪತ್ರಿಕೆಯಲ್ಲಿ ಕೆಲಸ ಮಾಡುವವರಿಗೆ ಹೆಣ್ಣು ಕೊಡುತ್ತಿರಲಿಲ್ಲ. ಪತ್ರಕರ್ತರೊಬ್ಬರು ಹೆಣ್ಣು ನೋಡಲು ಹೋದಾಗ, ‘ಪತ್ರಿಕೆಯಲ್ಲಿ ಕೆಲಸ ಮಾಡೋದೇನೋ ಸರಿ. ಜೀವನಕ್ಕೆ ಏನು ಮಾಡ್ತೀರಿ’ ಅಂತ ಒಬ್ಬರು ಕೇಳಿದ್ದರಂತೆ ಎಂಬುದು ಪತ್ರಿಕೋದ್ಯಮದಲ್ಲಿ ಚಾಲ್ತಿಯಲ್ಲಿರುವ ಹಳೆಯ ಘಟನೆ.
ಆದರೆ, ನನ್ನ ಗೆಳೆಯನೊಬ್ಬನಿಗೆ ಸಂಬಳ ಹೆಚ್ಚು ಅನ್ನೋ ಕಾರಣಕ್ಕೆ ಹೆಣ್ಣು ಕೊಡಲಿಲ್ಲ. ಅವನಿಗೆ ಮೂವತ್ತು ಸಾವಿರ ಸಂಬಳ ಬರುತ್ತದೆ ಎಂದರೆ ನಂಬಲು ಹೆಣ್ಣಿನ ಕಡೆಯವರಿಗೆ ಸಾಧ್ಯವೇ ಆಗಲಿಲ್ಲ. ಕೊನೆಗೆ ಈ ಪರಿ ಸುಳ್ಳು ಹೇಳೋ ಗಂಡಿಗೆ ಹೆಣ್ಣು ಕೊಡಲ್ಲ ಎಂದು ಬಿಟ್ಟರು!.
ಹೌದು, ನಾನು ಧಾರವಾಡಕ್ಕೆ ಬಂದ ಐದು ತಿಂಗಳಲ್ಲಿ ಸರ್ಕ್ಯೂಲೇಶನ್ ವಿಭಾಗಕ್ಕೆ ಶಿವಾನಂದ ಚಿಕ್ಕಮಠ ನೇಮಕವಾಯಿತು. ಆತ ಬರಿಯ ಸಹೋದ್ಯೋಗಿಯಾಗದೆ ನನ್ನ ರೂಂಮೇಟ್ ಆದ. ಹೋಗಿ -ಬನ್ನಿ ಮಾಯಾವಾಗಿ ಹೋಗಲೇ ಅನ್ನುವಷ್ಟು ಆತ್ಮೀಯರಾದೆವು. ಆತನಿಗೆ ಬರವಣಿಗೆಯ ಮೋಹವೂ ಇದ್ದುದ್ದರಿಂದ ನನ್ನ ಕೆಲಸದಲ್ಲಿ ಅವನು, ನಾನು ಅವನ ಕೆಲಸದಲ್ಲಿ ಕೈ ಜೋಡಿಸುತ್ತಿದ್ದೆವು. ಒಂದು ದಿನ ಧಾರವಾಡ ರೈಲ್ವೆ ಸ್ಟೇಷನ್ನಲ್ಲಿ ನಾನು ಟೋಪಿ ಧರಿಸಿ ಪೇಪರ್ ಮಾರುವಂತೆಯೂ ಮಾಡಿದ್ದ. ಕೆಲಸದಲ್ಲಿ ದೈತ್ಯ ಆತ.
ಸುಮಾರು ಒಂದು ವರ್ಷದಲ್ಲಿ ಆತನ ದೈತ್ಯ ಕೆಲಸ ಕೇಂದ್ರ ಸರ್ಕಾರಿ ನೌಕರಿ ಎಂದೇ ಕರೆಯಿಸಿಕೊಳ್ಳುವ ಇಂಗ್ಲಿಷ್ನ ದಿ ಹಿಂದು ಪತ್ರಿಕೆಯವರಿಗೆ ಇಷ್ಟವಾಗಿ ನೇಮಿಸಿಕೊಂಡರು. ನಮ್ಮಲ್ಲಿ ಟಿಎ ಡಿಎ ಎಲ್ಲಾ ಸೇರಿ ಹತ್ತು ಸಾವಿರ ರು.ವರೆಗೆ ಸಂಬಳ ಬರುವುದು ಕಷ್ಟವಿತ್ತು. ಆದರೆ, ದಿ ಹಿಂದು ಪತ್ರಿಕೆಯಲ್ಲಿ ಆತ ಟಿಎ ಡಿಎ ಎಲ್ಲಾ ಸೇರಿ ತಿಂಗಳಿಗೆ ಮೂವತ್ತು ಸಾವಿರ ರು.ವರೆಗೂ ಪಡೆಯುತ್ತಾನೆ. ಅದೇ ಸತ್ಯವನ್ನು ಹೆಣ್ಣಿನ ಕಡೆಯವರಿಗೆ ನಂಬಲಾಗಲಿಲ್ಲ. ಒಮ್ಮೆ ನೇರವಾಗಿಯೇ, ತಮಾಷೆ ಬೇಡ ಸರಿಯಾಗಿ ಹೇಳಿ ಎಂದು ಕೇಳಿದ್ದಾರೆ. ಪೇಪರ್ ಕೆಲಸದಲ್ಲಿ ಇಷ್ಟು ಕೊಡುವುದು ಸಾಧ್ಯವೇ ಇಲ್ಲ ಎಂದು ವಾದಿಸಿದ್ದಾರೆ. ಆತ ಕಚೇರಿಯಲ್ಲಿ ಇಲ್ಲದ ಸಮಯ ನೋಡಿ ಅವರ ಮೇಲಿನವರಲ್ಲಿ ವಿಚಾರಿಸಿದ್ದಾರೆ. ಅವರು ಸಂಬಳದ ಮೊತ್ತ ಅಷ್ಟೇ ಹೇಳಿದ್ದಾರೆ. ಕೊನೆಗೆ ಮದುವೆ ದಲ್ಲಾಳಿಯ ಬಳಿ, ‘ಮದುವೆಗೆ ಮೊದಲೆ ಈ ಪರಿ ಸುಳ್ಳು ಹೇಳ್ತಾರಲ್ರಿ. ಅವರ ಆಫೀಸಲ್ಲೂ ಅಡ್ಜಸ್ಟ್ ಮಾಡಿಸ್ಯಾನ. ಹೆಣ್ಣು ಕೊಡಲ್ಲ’ ಅಂದು ಬಿಟ್ಟರಂತೆ.
ನನಗೆ ಫೋನ್ ಮಾಡಿ ಹೇಳಿದಾಗ ಇಬ್ಬರೂ ಜೋರಾಗಿ ನಕ್ಕಿದ್ದೆವು. ಕೈಯಾಗ ರೊಕ್ಕ ಇಲ್ಲದ ಕಾಲದಾಗೂ ಹೆಣ್ಣು ಕೊಡಲಿಲ್ಲ, ರೊಕ್ಕ ಐತಿ ಅಂದ್ರು ಕೊಡ್ತಿಲ್ವಲ್ಲ ಎಂದು ನಗುತ್ತಲೇ ವಿಷಾದ ವ್ಯಕ್ತಪಡಿಸಿದ್ದ. ಆ ಶಿವಾನಂದನಿಗೆ ಕೊನೆಗೂ ಜಮಖಂಡಿ ಬಳಿಯ ಹೆಣ್ಣು ಗೊತ್ತಾಗಿದೆ. ಮೇ 26ರಂದು ಬೆಳಗಾವಿಯಲ್ಲಿ ಮದುವೆ. ಆದರೆ, ನಮ್ಮ ಶಿವಾನಂದನಿಗೆ ಒಂದು ಡೌಟು -‘ಆ ಹುಡುಗಿಗೆ ಟೇಸ್ಟೆ ಇಲ್ಲ ಅನ್ಸುತ್ತಾ ಇದೆ. ಸುಮಾರು ನೂರು ಹುಡುಗಿಯರನ್ನು ನೋಡಿದೆ. ಎಲ್ಲರಿಂದಲೂ ತಿರಸ್ಕೃತನಾದ ನನ್ನನ್ನು ಅಷ್ಟು ಚೆನ್ನಾಗಿ ಇರೋ ಹುಡುಗಿ ಒಪ್ಯಾಳಲ್ಲ. ಕೇಳೇ ಬಿಡ್ಲಾ ಅವಳ್ನಾ..’ಎಂದ. ಬೇಡ ಇರು ಗುರು ಮದುವೆ ಆದ್ಮೇಲೆ ಕೇಳು. ಆಮೇಲೆ ಅವಳು ಬ್ಯಾಡ ಅಂದಾಳು ಎಂದು ನಕ್ಕೆವು. ಇಷ್ಟು ದಿನ ಇಬ್ಬರು ಸೇರಿದರೆ ನಗುವುದೇ ಕಾಯಕವಾಗಿತ್ತು. ಮೇ 26ರಂದು ಕೊನೆಯ ಬಾರಿ ನಕ್ಕು ಬಿಡು ಎಂದಿದ್ದೇನೆ. ನಿನ್ನ ನಗುವಿಗೂ ಕೊನೆ ಹೇಳ್ತೀನಿ ಅಂತ ಶಪಥ ಮಾಡ್ಯಾನ. ಶಪಥ ಸುಳ್ಳಾಗಿ, ಅವನ ಹೊಸ ಜೀವನಕ್ಕೆ ಒಳ್ಳೆಯದಾಗಲಿ. ನಗು ಜಾರಿಯಲ್ಲಿರಲಿ...,
7 comments:
Dear Avinash...
The important part that I liked in your blog is the love that you show towards humanity which is getting lost in most of the metros. Amazing stuff...Most of us face these kind of experiences but many of them fail to express. This is what I liked in this blog. Great going...keep up the good work...
By the way...I am writing a book based on my experience during Maggie's election campaign...Will let you know the details soon.
Do stay in touch...
Dhananjaya
ಅಷ್ಟು ಮೊತ್ತದ ಸಂಬಳ ಪಡೆವುದು ಪತ್ರಕರ್ತರಲ್ಲ ಎಂಬ ಹುಸಿನಂಬಿಕೆ ಮಾಯವಾಗಿ ಎಲ್ಲರಿಗೂ ತಿಲಿಯಲ್ ಪತ್ರಕೆ ಕೆಲಸ ಕೂಡ ಒಳ್ಳೆ ಪಗಾರ ಕೊಡುತ್ತೆ ಅಂತ...ಏನೇ ಅಗಲಿ ಚಿಕ್ಕ ಮಠ ಮದ್ವೆ ಆಗಿ ಮಕ್ಕಳಿಗಾಗಿ ದೊಡ್ಡ ಮಠ ವನ್ನೇ ಕತ್ತಿಸುವನ್ತಗಲಿ...
Dear dhananjay Thanx for the compliments. book on election experience is v. good. I will eagery waiting for that
hi chikkamatanige conrats, avarivara maduve madisi gedde endu nagabeda. 27 kke ninagu mahoorta fix agide endu maribeda. anna blog ge hosa kale bandide.
"Dudde jeevana alla
Jeevanadalli duddu kooda ondu"
Hanadindale samsaara sagolla
Samsaarakke preethi, nambike,saadhane, sahasa, sukha-dukkhagala hanchike, jothege hana beku ashte.
Hana ondu minchuhulada haage,
Minchi mayavagutthe.
Iddaaga anubhavisi Illadiddaga anusarisi munnadedare naave buddivantharallave?
Duddigintha manushyathvakke hecchu bele ide alva?
"Vivaaha vyavahaaravaagadirali"
SharmilaNataraj
heegu unte anista ide!!
-Hari
ಸರ ಪತ್ರಿಕೋದ್ಯಮದ ಬಗ್ಗೆ ನಮ್ಮ ಸಮಾಜದಲ್ಲಿ ಇಂತ ಭಾವನೆ ಇರೋದರಿಂದಲೇ ಇಂಗ್ಲಿಸ್ ಪತ್ರಿಕೆಗಳು
ವರದಿಗರರ tಒಂದರೆ ಅನುಭವಿಸುತ್ತಿದೆ
Post a Comment